ಕರಾವಳಿ

ಸಿಎಂ ವಿರುದ್ಧ ಅವಹೇಳನಕಾರಿ ಬರಹ; ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Pinterest LinkedIn Tumblr

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಿಯನ್ನು ಕಾರ್ಕಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್ ಬಂಧಿತ ಆರೋಪಿ. ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್ ಎಂಬಾತ ‘ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಇನ್ಸ್ಟಾಗ್ರಾಮ್ ನಲ್ಲಿ ಪ್ರಚೋದನಕಾರಿ ಫೋಸ್ಟ್ ಮಾಡಿದ್ದಾನೆ. ಇನ್ನು ಈ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತನಿಖೆಯ ಬಳಿಕ ಆರೋಪಿ ಬೆಂಗಳೂರಿನ ಹೋಂಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂಪತ್‌ ಸಾಲಿಯಾನ್ ಎಂಬಾತನನ್ನು ಮೇ 4ರಂದು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

Comments are closed.