ಕರ್ನಾಟಕ

ಸಾಹಿತಿ, ಕವಿ ಜಿ.ಎಸ್.ಸಿದ್ದಲಿಂಗಯ್ಯ ವಿಧಿವಶ

Pinterest LinkedIn Tumblr

ಬೆಂಗಳೂರು: ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ(94) ಅವರು ವಯೋಸಹಜ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿಯನ್ನು ಅಗಲಿದ್ದಾರೆ.

ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು(ಬುಧವಾರ) ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ‌.

ತುಮಕೂರು ಜಿಲ್ಲೆ ಬೆಳ್ಳಾವಿಯ ಸಿದ್ದಲಿಂಗಯ್ಯ ಅವರು 1931ರಲ್ಲಿ ಜನಿಸಿದ್ದರು. ಕಾಲೇಜು ಶಿಕ್ಷಣದವರೆಗಿನ ವಿದ್ಯಾಭ್ಯಾಸವನ್ನು ಊರಿನಲ್ಲಿ ಪೂರೈಸಿದರು. ನಂತರ ಬಿಎ(ಆನರ್ಸ್), ಎಂ.ಎ ಕನ್ನಡದಲ್ಲಿ‌ ಮೊದಲ ದರ್ಜೆಯಲ್ಲಿ ಉತ್ತೀರ್ಣರಾದರು. ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಉದ್ಯೋಗ ಆರಂಭಿಸಿದರು. ಮುಂದೆ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಸಾಹಿತಿ, ಕವಿ ಹಾಗೂ‌ ವಿಮರ್ಶಕರಾಗಿದ್ದ ಸಿದ್ದಲಿಂಗಯ್ಯನವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು.

ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

 

Comments are closed.