ಕರ್ನಾಟಕ

ಬೆಂಗಳೂರಿನಲ್ಲಿ ನಡೆದ ‘ಆಪರೇಷನ್ ಅಭ್ಯಾಸ್’ ಅಣಕು ಕಾರ್ಯಾಚರಣೆಯಲ್ಲಿ ಗೃಹಸಚಿವ ಪರಮೇಶ್ವರ್ ಭಾಗಿ

Pinterest LinkedIn Tumblr

ಬೆಂಗಳೂರು: ಕೇಂದ್ರ ಗೃಹ ಇಲಾಖೆ ಹಾಗೂ ರಕ್ಷಣಾ ಇಲಾಖೆಯ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಬೆಂಗಳೂರಿನ ಹಲಸೂರಿನಲ್ಲಿ ಹಮ್ಮಿಕೊಂಡಿದ್ದ ‘ಆಪರೇಷನ್ ಅಭ್ಯಾಸ್’ ಅಣಕು ಕಾರ್ಯಾಚರಣೆಯಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್ ಭಾಗವಹಿಸಿದರು.

ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಸಿಬ್ಬಂದಿ, ಸಿವಿಲ್ ಡಿಫೆನ್ಸ್‌ನವರು ನಾಗರಿಕರಿಗೆ ತುರ್ತು ಪರಿಸ್ಥಿತಿ ಎದುರಿಸುವ ಜಾಗೃತಿ ಹಾಗೂ ಸಂಕಷ್ಟದಲ್ಲಿ ಸಿಲುಕಿರುವವರ ರಕ್ಷಣೆ, ಅಗ್ನಿಶಮನ, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡುವ ಕಾರ್ಯಾಚರಣೆಯ ಕುರಿತು ಅಣಕು ಪ್ರದರ್ಶನ ಮಾಡಲಾಯಿತು.

ಪಹಲ್ಗಾಮ್‌ನಲ್ಲಿ‌ ಭಯೋತ್ಪಾದಕರ ಏಕಾಏಕಿ ದಾಳಿಯಿಂದ 26 ಜನ ಅಮಾಯಕ ಪ್ರವಾಸಿಗರು ಪ್ರಾಣ‌ ಕಳೆದುಕೊಂಡಿದ್ದಾರೆ. ಇದನ್ನು ನೆನಸಿಕೊಂಡರೆ‌ ಪ್ರತಿಯೊಬ್ಬ ಭಾರತೀಯನಿಗೆ ನೋವಾಗುತ್ತದೆ.‌ ಕೃತ್ಯ ಎಸಗಿ ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರಗಾಮಿ ನೆಲೆಗಳ ಮೇಲೆ ನಿನ್ನೆ ರಾತ್ರಿ ನಮ್ಮ ರಕ್ಷಣಾ ಇಲಾಖೆಯು ದಾಳಿ ನಡೆಸಿ ಪ್ರತಿಕಾರ ತೀರಿಸಿಕೊಂಡಿದೆ. ನಾಗರಿಕರ ರಕ್ಷಣೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಕೆಲವು ಮುನ್ನೆಚ್ಚರಿಕಾ ಸೂಚನೆಗಳನ್ನು ನಾವೆಲ್ಲ ಪಾಲಿಸಬೇಕು.‌ ರಕ್ಷಣಾ ಪಡೆಗಳ ಬೆನ್ನಿಗೆ ನಿಲ್ಲಬೇಕು ಎಂದು ಈ ವೇಳೆ‌ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಡಾ. ಕೆ.ಸುಧಾಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್, ಗೃಹ ಇಲಾಖೆಯ ಕಾರ್ಯದರ್ಶಿ ಎಸ್.ರವಿ, ಡಿಐಜಿ ರವಿ.ಡಿ.ಚನ್ನಣ್ಣನವರ್ ಸೇರಿದಂತೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

 

Comments are closed.