ಕರಾವಳಿ

ಗಾಂಜಾ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದ ಇಬ್ಬರನ್ನು ಬಂಧಿಸಿ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಕಳಿಸಿದ ಉಡುಪಿ‌ ಪೊಲೀಸರು!

Pinterest LinkedIn Tumblr

ಉಡುಪಿ: ಗಾಂಜಾ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗಿರುವ ಜಿಲ್ಲೆಯ ಹಲವು ಠಾಣೆಯಲ್ಲಿ ಪ್ರಕರಣಗಳ ಆರೋಪಿಗಳನ್ನು ಪಿಟ್ ಎನ್.ಡಿ.ಪಿ.ಎಸ್ ಕಾಯಿದೆ ಅಡಿಯಲ್ಲಿ ಬಂಧಿಸಲಾಗಿದೆ.

ಉಳ್ಳೂರು ಗ್ರಾಮದ ಕೊಳಲಗಿರಿಯ ಕೃಷ್ಣ ಆಚಾರಿ ಯಾನೆ ಕೃಷ್ಣ(43) ಹಾಗೂ ಕೇಳಾರ್ಕಳಬೆಟ್ಟುವಿನ ಅಬ್ದುಲ್ ಜಬ್ಬಾರ್ (27) ಬಂದಿತ ಆರೋಪಿಗಳು. ಇವರನ್ನು ಕೇಂದ್ರ ಕಾರಾಗೃಹ ಧಾರವಾಡಕ್ಕೆ ಕಳುಹಿಸಿ ಬಂಧನದಲ್ಲಿ ಇಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿರುವ ಆರೋಪಿಗಳ ಬಗ್ಗೆ ಕಡಿವಾಣ ಹಾಕಲು ಹಾಗೂ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಜರಗಿಸಲಾಗಿದೆ ಎಂದು ಉಡುಪಿ ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

Comments are closed.