ಕರಾವಳಿ

ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ ನಿಧನ

Pinterest LinkedIn Tumblr

ಕುಂದಾಪುರ: ತಾಲೂಕಿನ ಪ್ರಸಿದ್ಧ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಎಮ್. ಪ್ರಭಾಕರ್ ಶೆಟ್ಟಿ(65) ಬುಧವಾರ ಸಂಜೆ ಹೃದಯಘಾತದಿಂದ ನಿಧನರಾದರು.

ಕೋಟೇಶ್ವರದ ಪ್ರತಿಷ್ಟಿತ ರೋಟರಿ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ ರೋಟರಿ ಅಸಿಸ್ಟೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿ ತಮ್ಮದೇ ಆದ ಸಾಮಾಜಿಕ ಸೇವೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಹಾಗೂ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸತತ 2 ಅವಧಿಗೆ ಅಧ್ಯಕ್ಷರಾಗಿ ದೇವಳದಲ್ಲಿ ಧ್ವಜಮರ ಪ್ರತಿಷ್ಠೆ ಹಾಗೂ ಜೀರ್ಣೋದ್ಧಾರ ಕಾರ್ಯ ಸೇರಿದಂತೆ ಬಹುತೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದರು. ಸ್ಥಳೀಯ ಹಲವು ಸಂಘ ಸಂಸ್ಥೆಗಳಲ್ಲಿ ಗೌರವಾಧ್ಯಕ್ಷರಾಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿದ ಇವರು ಅಂದಿನ ಬೀಜಾಡಿ-ಗೋಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಇವರು ತಾಯಿ, ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

ಗುರುವಾರ ಅಂತ್ಯ ಸಂಸ್ಕಾರ: ಮೃತರ ಅಂತ್ಯ ಸಂಸ್ಕಾರವನ್ನು ಮೇ.29ರ ಬೆಳಿಗ್ಗೆ  ಮೂಡುಗೋಪಾಡಿಯ ಸ್ವಗೃಹದಲ್ಲಿ ನಡೆಸಲಿದ್ದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Comments are closed.