ಕುಂದಾಪುರ: ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ಸಿಂಚನಾ ಪ್ರಥಮ ಸ್ಥಾನ ಪಡೆದಿದ್ದಾರೆ. ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ತನ್ವಿತಾ ತೃತೀಯ ಸ್ಥಾನ ಪಡೆದಿದ್ದಾರೆ.

ಸಾಧಕ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Comments are closed.