ಕರಾವಳಿ

ಚಿಕ್ಕಮಗಳೂರು-ತಿರುಪತಿ ರೈಲಿಗೆ ಜುಲೈ 11ಕ್ಕೆ ಚಿಕ್ಕಮಗಳೂರಿನಲ್ಲಿ ಚಾಲನೆ ನೀಡಲಿರುವ ಸಚಿವ ವಿ. ಸೋಮಣ್ಣ

Pinterest LinkedIn Tumblr

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ, ವಿ. ಸೋಮಣ್ಣ ಜುಲೈ 11ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಪೂರ್ವಾಹ್ನ 11 ಗಂಟೆಗೆ ಹೊಸತಾಗಿ ಆರಂಭವಾಗುವ ಚಿಕ್ಕಮಗಳೂರು ತಿರುಪತಿ ರೈಲಿಗೆ ಚಾಲನೆ ನೀಡಲಿದ್ದಾರೆ.

ವಿಶೇಷ ರೈಲಿನ ಮೂಲಕ ಚಿಕ್ಕಮಗಳೂರಿಗೆ ಆಗಮಿಸುವ ಸಚಿವ ಸೋಮಣ್ಣ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರನ್ನೂ ಭೇಟಿ ಮಾಡಿ ಅಪರಾಹ್ನ ನಿರ್ಗಮಿಸಲಿದ್ದಾರೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಕಚೇರಿಯ ಪ್ರಕಟಣೆ ತಿಳಿಸಿದೆ.

Comments are closed.