ಕರಾವಳಿ

ತಾನು ಕಲಿತ ಸರಕಾರಿ ಶಾಲೆಗೆ ವಾಹನ ಕೊಡುಗೆ ನೀಡಿದ ಶಾಲಾ ಹಳೆ ವಿದ್ಯಾರ್ಥಿ, ಜನತಾ ಪಿಯು ಕಾಲೇಜು ಪ್ರಾಂಶುಪಾಲ ಗಣೇಶ ಮೊಗವೀರ

Pinterest LinkedIn Tumblr

ಕುಂದಾಪುರ: ತನ್ನ ಭವಿಷ್ಯದ ಭದ್ರ ಬುನಾದಿ ಹಾಕಿಕೊಟ್ಟ ಪ್ರಾಥಮಿಕ ಶಿಕ್ಷಣವನ್ನು ಪಡೆದ ಹೆಮ್ಮಾಡಿ ಊರಿನ ಹೆಮ್ಮೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ವಾಹನ ಸೌಲಭ್ಯವನ್ನು, ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಶಾಲೆಗೆ ವಾಹನ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರು, ಪದಾಧಿಕಾರಿಗಳು, ಸರ್ವಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಹಾಗೂ ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

Comments are closed.