ಕರ್ನಾಟಕ

‘ಅಮೃತಧಾರೆ’ ಧಾರಾವಾಹಿ ನಟಿಗೆ ಪತಿಯಿಂದ ಚಾಕು ಇರಿತ!

Pinterest LinkedIn Tumblr

ಬೆಂಗಳೂರು: ಕಿರುತೆರೆ ಧಾರಾವಾಹಿ ನಟಿ ಹಾಗೂ ನಿರೂಪಕಿಗೆ ಆಕೆಯ ಗಂಡನೇ ಚಾಕುವಿನಿಂದ ಇರಿದಿರುವ ಘಟನೆ ವರದಿಯಾಗಿದೆ.

ಕಿರುತೆರೆ ಧಾರಾವಾಹಿ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಮಂಜುಳಾ ಅಲಿಯಾಸ್‌ ಶ್ರುತಿಗೆ ಚಾಕು ಇರಿಯಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಗಂಡನೇ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಬಳಿಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಜುಲೈ 4 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತಂತೆ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದು, ಪೊಲೀಸರು ಕೇಸ್‌ ದಾಖಲಿಸಿ ಆರೋಪಿ ಅಮರೇಶ್‌ನನ್ನು ಬಂಧಿಸಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನ್ನಡದಲ್ಲಿ ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ಶ್ರುತಿ ನಟಿಸಿದ್ದಾರೆ.

ಇನ್ನು ಮೂಲಗಳ ಪ್ರಕಾರ ನಟಿ ಶೃತಿಯ ಶೀಲ ಶಂಕಿಸಿ ಆಕೆಯ ಪತಿ ಅಮರೇಶ್ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಮಂಜುಳಾ (ಶೃತಿ) 20 ವರ್ಷದ ಹಿಂದೆ ಅಮರೇಶ್‌ ಎಚ್‌ಎಸ್‌ ಎಂಬಾತನ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗಿ ಈ ಜೋಡಿಗೆ ಇಬ್ಬರು ಹೆಣ್ಣು ಮಕ್ಕಳು ಕೂಡ ಇದ್ದರು. ಸಂಸಾರ ಸಮೇತ ಹನುಮಂತ ನಗರದಲ್ಲಿ ಲೀಸ್ ಗೆ ಮನೆ ಪಡೆದು ದಂಪತಿ ವಾಸವಿದ್ದರು.

ನಟಿ ಶೃತಿ ಧಾರಾವಾಹಿಗಳಲ್ಲಿ ನಟಿಸುತ್ತಿದ್ದು ಆಕೆಯ ನಡವಳಿಕೆ ಗಂಡ ಅಮರೇಶ್‌ಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಸರಿಯಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಗಂಡನಿಂದ ದೂರಾಗಿ ಶ್ರುತಿ ಅಣ್ಣನ ಮನೆಯಲ್ಲಿ ವಾಸವಿದ್ದರು. ಕಳೆದ ಏಪ್ರಿಲ್‌ನಲ್ಲಿ ಶ್ರುತಿ ಗಂಡನಿಂದ ದೂರವಾಗಿದ್ದರು. ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಸಹ ಜಗಳ ನಡೆದಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂದಾನ ಮಾಡಿ ಗಂಡ-ಹೆಂಡತಿ ಒಂದಾಗಿದ್ದರು. ಆದರೆ, ಇಬ್ಬರೂ ಒಂದಾದ ಮಾರನೇ ದಿನವೇ ಗಂಡ ಪತ್ನಿಗೆ ಚಾಕು ಇರಿದಿದ್ದಾನೆ. ಕಳೆದ ಶುಕ್ರವಾರ ಮಕ್ಕಳಿಬ್ಬರು ಕಾಲೇಜಿಗೆ ಹೋದ ನಂತರ ಕೆಲಸಕ್ಕೆ ಹೋಗಿದ್ದ ಅಮರೇಶ್ ಮಧ್ಯಾಹ್ನ ಮನೆಗೆ ವಾಪಸ್ ಆಗಿದ್ದಾನೆ. ಮನೆಗೆ ಬಂದ ಕೂಡಲೇ ಪೆಪ್ಪರ್ ಸ್ಪ್ರೇ ಹೊಡೆದು ಹೆಂಡತಿಗೆ ಚಾಕು ಇರಿದು ಕೊಲೆಗೆ ಯತ್ನ ನಡೆಸಿದ್ದಾನೆ. ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕುವಿನಿಂದ ಇರಿದು ಪತಿ ಅಮರೇಶ್‌ ಕೊಲೆಗೆ ಯತ್ನ ನಡೆಸಿದ್ದಾರೆ. ಅಮರೇಶ್ ಸಿನಿಮಾ ಸ್ಟೈಲ್ ನಲ್ಲಿ ತಲೆ ಕೂದಲು ಹಿಡಿದು ಗೋಡೆ ತಲೆ ಗುದ್ದಿಸಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

Comments are closed.