ಕರಾವಳಿ

ಉಡುಪಿ: ಸ್ಥಳ ಮಹಜರು ವೇಳೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಫೋಕ್ಸೋ ಪ್ರಕರಣದ ಆರೋಪಿ!

Pinterest LinkedIn Tumblr

ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಕರ್ತವ್ಯ ನಿಷ್ಠೆ ಮೆರೆದು ಲಾಠಿ ಏಟು ನೀಡುವ ಮೂಲಕ ಬಂಧಿಸಲು ಯಶಸ್ವಿಯಾಗಿದ್ದಾರೆ.

ಘಟನೆ ವೇಳೆಗೆ ಗಾಯಗೊಂಡ ಉಡುಪಿ ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ರಿತೇಶ್ ಹಾಗೂ ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿರುವ ಉತ್ತರ ಪ್ರದೇಶ ಮೂಲದ ಮಣಿಪಾಲ ವಿ.ಪಿ.ನಗರದ ನಿವಾಸಿ ಮುಹಮ್ಮದ್ ದಾನೀಶ್(29) ಎಂಬವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.12ರಂದು ಆರೋಪಿ ಮುಹಮ್ಮದ್ ದಾನೀಶ್ ನನ್ನು ಪೊಲೀಸರು ಬಂಧಿಸಿದ್ದರು.ಪ್ರಕರಣದ ತನಿಖೆಗಾಗಿ ಜು.೧೩ರಂದು ಮಣಿಪಾಲ ತಾಂಗೋಡು 2ನೇ ಕ್ರಾಸ್ ಹಾಡಿ ಬಳಿ ಕೃತ್ಯವೆಸಗಿದ ಸ್ಥಳವನ್ನು ಪಂಚನಾಮೆಯನ್ನು ಮಾಡುವ ಪೊಲೀಸರು ದಾನೀಶ್ ನನ್ನು ಕರೆದುಕೊಂಡು ಹೋಗಲಾಗಿತ್ತು.

ಅದೇ ಸಂದರ್ಭದಲ್ಲಿ ಆರೋಪಿಯು ಕೈಕೊಳ ಹಿಡಿದುಕೊಂಡಿದ್ದ ಪೊಲೀಸ್ ಸಿಬ್ಬಂದಿ ರಿತೇಶ್ ರವರ ಎದೆಗೆ ಎರಡೂ ಕೈಗಳಿಂದ ಗುದ್ದಿ ದೂಡಿ ನೆಲಕ್ಕೆ ಬೀಳಿಸಿ ಅಲ್ಲಿಯೇ ಇದ್ದ ಕಲ್ಲನ್ನು ಎತ್ತಿಹಾಕಲು ಕೊಲೆಗೆ ಪ್ರಯತ್ನಿಸಿದ್ದನು.ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ತಡೆದಾಗ ಅವರ ಮೇಲು ಒದೆಯಲು ಬಂದಿದ್ದನು. ಆ ಸಮಯ ಲಾಠಿಯಿಂದ ಆತನ ಕಾಲಿಗೆ ಹೊಡೆದು, ಅವನನ್ನು ನಿಯಂತ್ರಿಸಿದ್ದು, ಉಳಿದ ಸಿಬ್ಬಂದಿಗಳು ಆತನನ್ನು ಹಿಡಿದಿದ್ದಾರೆ.

Comments are closed.