ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳವು ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂತೋಷ್ ಹನುಮಂತ ಕಟ್ಟಿಮನಿ (39) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ 32000ರೂ. ನಗದು ಹಾಗೂ ಮೊಬೈಲ್ನ್ನು ವಶಪಡಿಸಿಕೊಳ್ಳಲಾಗಿದೆ.
ಸೊಸೈಟಿಯೊಂದರ ಪಿಗ್ನಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್ ಎದುರುಗಡೆ ಕರ್ನಾಟಕ ಬ್ಯಾಂಕ್ ಎಟಿಎಮ್ ಬಳಿ ಪಿಲ್ಮೀ ಕಲೆಕ್ಷನ್ ಮಾಡಿದ ನಗದನ್ನು ಬೈಕ್ ನ ಸೈಡ್ ಬಾಕ್ಸ್ನಲ್ಲಿ ಇಟ್ಟು ಬೀಗ ಹಾಕಿ ಹೋಟೆಲ್ಗೆ ಹೋಗಿ ಪಿಗ್ನಿ ಕಲೆಕ್ಷನ್ ಮಾಡಿದ್ದರು.
ಬಳಿಕ ವಾಪಾಸು ಬಂದು ನೋಡಿದಾಗ ಬೈಕ್ ನ ಬಾಕ್ಸ್ನಲ್ಲಿ ಇಟ್ಟ ನಗದು ಹಣವು ಕಾಣದೇ ಇದ್ದು ಪರಿಶೀಲಿಸಿದಾಗ ಬಾಕ್ಸ್ ನ ಬೀಗ ಒಡೆದು ಬಾಕ್ಸ್ನಲ್ಲಿದ್ದ ನಗದು ಹಣವನ್ನು ಮತ್ತು ಪಾನ್ ಕಾರ್ಡ್, ಆಧಾರ್ ಕಾರ್ಡ್ ಇತರೆ ದಾಖಲೆ ಪತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯ್ಕ್ ಮಾರ್ಗದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ ನಿರ್ದೇಶನದಂತೆ ಬ್ರಹ್ಮಾವರ ಸಿಪಿಐ ಗೋಪಿಕೃಷ್ಣ, ಬ್ರಹ್ಮಾವರ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಪಿ.ಎಸ್.ಐ ಅಶೋಕ್ ಮಾಳಬಗಿ, ಠಾಣಾ ತನಿಖಾ ಪಿ.ಎಸ್.ಐ ಸುದರ್ಶನ್ ದೊಡ್ಡಮನಿ, ಎ.ಎಸ್.ಐ ಜಯಕರ್ ಐರೋಡಿ, ಬ್ರಹ್ಮಾವರ ಠಾಣೆಯ ಸಿಬ್ಬಂದಿಗಳಾದ ಉದಯ್ ಅಮೀನ್, ಅಶೋಕ್ ಕೋಣೆ, ಅಶ್ವಿನ್ ಹಾಗೂ ಅಪರಾಧ ಪತ್ತೆ ಸಿಬ್ಬಂದಿಗಳಾದ ಮಹಮ್ಮದ್ ಅಜ್ಮಲ್ ಹೈಕಾಡಿ , ಕಿರಣ್ ಕುಮಾರ್, ಸಿದ್ದಪ್ಪ ಸಕನಳ್ಳಿ ಪಾಲ್ಗೊಂಡಿದ್ದರು.
Comments are closed.