ಕುಂದಾಪುರ: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿ ಸೂಚನೆ ಮೇರೆಗೆ ರಾಷ್ಟ್ರ ವ್ಯಾಪಿ ನಡೆಯುತ್ತಿರುವ ‘ಸ್ಟಾಪ್ ವೋಟ್ ಚೋರಿ’ ಸ್ಟಿಕರ್ ಅಭಿಯಾನವನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯ ಮುಂಭಾಗದಲ್ಲಿ ಕುಂದಾಪುರ ಯುವ ಕಾಂಗ್ರೆಸ್ ವತಿಯಿಂದ ಚಾಲನೆ ನೀಡಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಮೋದ್ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಕ್ಷೀತ್ ಶೆಟ್ಟಿ ಕಾಳವಾರ, ಪಕ್ಷದ ಮುಖಂಡರಾದ ಗಣೇಶ್ ಶೇರಿಗಾರ್, ಸಲಾಂ ತೆಕ್ಕಟ್ಟೆ, ಆಶಾ ಕರ್ವೆಲ್ಲೋ, ಅಶೋಕ್ ಸುವರ್ಣ, ಸುನೀಲ್ ಪೂಜಾರಿ ಕೋಡಿ, ನಿತೀಶ್ ಡಿಸೋಜಾ ಕೋಣಿ, ನಿನಾದ್ ಶೆಟ್ಟಿ, ರವೀಂದ್ರ ಶೆಟ್ಟಿ , ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಭಿಜಿತ್ ಪೂಜಾರಿ ಹೇರಿಕುದ್ರು ಮೊದಲಾದವರು ಉಪಸ್ಥಿತರಿದ್ದರು.
Comments are closed.