ಕರಾವಳಿ

ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಲೋಗೋ ಅನಾವರಣ

Pinterest LinkedIn Tumblr

ಕುಂದಾಪುರ: ತಾಲೂಕಿನ ವಕ್ವಾಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಲಾದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಲೋಗೋ ಅನಾವರಣ ಕಾರ್ಯಕ್ರಮ ಜರುಗಿತು.

ಉತ್ತರ ಕನ್ನಡದ ಹೊನ್ನಾವರ ಶ್ರೀದೇವಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಚಂದ್ರಶೇಖರ್ ಶೆಟ್ಟಿ ಲೋಗೋ ಅನಾವಾರಣಗೊಳಿಸಿ ಶುಭಹಾರೈಸಿದರು.

ತಾಲೂಕು ಕ್ರೀಡಾ ಕೂಟ ಸಮಿತಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಣಗಲ್ಲು ಮನೆ ವಕ್ವಾಡಿ, ವಕ್ವಾಡಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕುಸುಮಾಕರ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಬಾಲಕೃಷ್ಣ ಶೆಟ್ಟಿ, ಪ್ರಮುಖರಾದ  ವಿ.ಕೆ. ಶೆಟ್ಟಿ, ದೀಪಕ್ ಶೆಟ್ಟಿ ವಕ್ವಾಡಿ ಮೊದಲಾದವರಿದ್ದರು.

Comments are closed.