
ಬೆಂಗಳೂರು: ಕಾಂತಾರ ಚಾಪ್ಟರ್-1 ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಆಗಿದ್ದ ಕೆಲ ವಿಚಾರಗಳನ್ನು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸಿನೆಮಾವನ್ನು ಯಶಸ್ವಿಗೊಳಿಸಿದ ಜನರಿಗೆ ಧನ್ಯವಾದವನ್ನು ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

ಕ್ಲೈಮ್ಯಾಕ್ಸ್ ಶೂಟಿಂಗ್ ಸಮಯದಲ್ಲಿ ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ, ಇವತ್ತು ಕೋಟ್ಯಂತರ ಜನ ನೋಡಿ ಮೆಚ್ಚುವ ಹಾಗೆ ಆಗಿದೆ ಅಂದ್ರೆ ಅದಕ್ಕೆ ತೆರೆಹಿಂದೆ ನಾವು ಪಟ್ಟ ಶ್ರಮದ ಜೊತೆಗೆ ನಾವು ನಂಬಿರುವ ಶಕ್ತಿಗಳ ಆಶೀರ್ವಾದದಿಂದ ಮಾತ್ರ ಸಾಧ್ಯ ಎಂದು ಜಾಲತಾಣದಲ್ಲಿ ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ.
ಕಾಂತಾರ ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತಪಡಿಸಿದ ತಮ್ಮೆಲ್ಲರಿಗೂ ಧನ್ಯವಾದಗಳು ಎಂದು ರಿಷಬ್ ಜಾಲತಾಣದಲ್ಲಿ ಶೂಟಿಂಗ್ ಅನುಭವ ಹಂಚಿಕೊಂಡಿದ್ದಾರೆ.
Comments are closed.