ಕರ್ನಾಟಕ

ಖ್ಯಾತ ಹಾಸ್ಯ ನಟ, ಹಿರಿಯ ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ವಿಧಿವಶ

Pinterest LinkedIn Tumblr

ಬೆಂಗಳೂರು: ಹಿರಿಯ ರಂಗಭೂಮಿ ಕಲಾವಿದ, ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದ ರಾಜು ತಾಳಿಕೋಟೆ ಅವರು, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು.

ಕರಾವಳಿಗೆ ಸಿನಿಮಾವೊಂದರ ಚಿತ್ರೀಕರಣ ಮುಗಿಸಿ ಕೋಣೆಯಲ್ಲಿ ಮಲಗಿದ್ದಾಗ ಹೃದಾಯಘಾತವಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎನ್ನಲಾಗಿದೆ.

ವೃತ್ತಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ರಾಜು ತಾಳಿಕೋಟಿ ಹೆಜ್ಜೆಯಿಟ್ಟಿದ್ದು ಅವರು ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ ‘ಖಾಸ್ಗತೇಶ್ವರ’ ನಾಟಕ ಮಂಡಳಿಯ ಮಾಲೀಕರಾಗಿದ್ದರು.

Comments are closed.