ಕುಂದಾಪುರ: ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಅವರ ಜನ್ಮದಿನದ ಪ್ರಯುಕ್ತ ಕುಂದಾಪುರ ಯುವ ಕಾಂಗ್ರೆಸ್ ವತಿಯಿಂದ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ ನೇತ್ರತ್ವದಲ್ಲಿ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮತ್ತು ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷೀತ್ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ , ಕುಂದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು, ಕುಂದಾಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಪುರಸಭಾ ನಾಮನಿರ್ದೇಶಿತ ಸದಸ್ಯ ಅಶೋಕ್ ಸುವರ್ಣ, ಸುನೀಲ್ ಪೂಜಾರಿ ಕೋಡಿ, ಆನಗಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ಬಿಲ್ಲವ, ಕೋಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸೌಮ್ಯ ಮೋಗವೀರ, ವಿವಿಧ ಗ್ರಾಮ ಪಂಚಾಯತ್ ಸದಸ್ಯರಾದ ಗೀತಾ ಆನಗಳ್ಳಿ, ರೋಶನ್ ಬರೆಟ್ಟೊ ಹಂಗಳೂರು, ಅಶೋಕ್ ಭಂಡಾರಿ ಕೋಣಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯೆ ಆಶಾ ಕರ್ವೆಲ್ಲೋ, ಕಾಂಗ್ರೆಸ್ ಪಕ್ಷದ ಮುಖಂಡರಾದ ಡೆನಿಸ್ ಕೋತಾ ಹಂಗಳೂರು, ಕುಂದಾಪುರ ಬ್ಲಾಕ್ ಅಲ್ಪಸಂಖ್ಯಾತರ ಅಧ್ಯಕ್ಷ ಮುನಾಫ್ ಕೋಡಿ, ಪ್ರಮುಖರಾದ ಸಲಾಂ ತೆಕ್ಕಟ್ಟೆ, ನಿತಿನ್ ಕೋಣಿ, ಇರ್ಷಾದ್ ಗೋಪಾಡಿ, ಜೋಸೆಫ್ ರೆಬೆಲ್ಲೋ ಆನಗಳ್ಳಿ ಸಹಿತ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.