ಉಡುಪಿ: ಉಡುಪಿ ಜಿಲ್ಲೆಯ ವಿವಿದೆಡೆ ಅಕ್ರಮ ಹಾಗೂ ಅಪಾಯಕಾರಿ ರೀತಿಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ದೀಪಾವಳಿಯ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಪಟಾಕಿ ಖರೀದಿ ಹಾಗೂ ಸಂಗ್ರಹ ಮಾಡುತ್ತಿರುವ ಮಾಹಿತಿ ಮೇರೆಗೆ ಈ ಕ್ರಮಕೈಗೊಳ್ಳಲಾಗಿದೆ. ವಶಪಡಿಸಿಕೊಂಡ ಪಟಾಕಿಗಳನ್ನು ಪರವಾನಿಗೆ ಪಡೆದು ಸುರಕ್ಷಿತವಾಗಿ ಸಂಗ್ರಹಿಸಿ ನಂತರ ನಾಶಪಡಿಸಲಾಗುವುದು ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಈ ಬಗ್ಗೆ ಮೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Comments are closed.