ಕುಂದಾಪುರ: ಪುರಾಣ ಪ್ರಸಿದ್ಧ ಕಾಳಾವರ ಶ್ರೀ ಮಹಾಲಿಂಗೇಶ್ವರ ಮತ್ತು ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನದಲ್ಲಿ ನ.26 ರಂದು ಹಿರಿ ಷಷ್ಠಿ (ಚಂಪಾ ಷಷ್ಠಿ) ಹಾಗೂ ನ.27 ರಂದು ನಡೆಯುವ ನಾಗಮಂಡಲೋತ್ಸವ ಕಟ್ಟುಕಟ್ಟಲೆ ಆಚರಣೆ ಪ್ರಯುಕ್ತ ಭಾನುವಾರ ದೇವಸ್ಥಾನದ ಆವರಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಿದ್ದು ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಅಜಿತ್ ಶೆಟ್ಟಿ ಅಸೋಡು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಕೆ. ರಂಜಿತ್ ಕುಮಾರ್ ಶೆಟ್ಟಿ ಸಲ್ವಾಡಿ , ರತ್ನಾಕರ್ ಶೆಟ್ಟಿ ಕಾಳಾವರ, ಪ್ರಧಾನ ಅರ್ಚಕ ಸತ್ಯನಾರಾಯಣ ಪುರಾಣಿಕ, ಸುಧೀರ್ ಕಾಳಾವರ, ರಾಜೀವಿ ಕಾಳಾವರ, ಸುಧಾಕರ್ ಶೆಟ್ಟಿ ಕಾಳಾವರ, ಅಕ್ಷತಾ ಶೆಟ್ಟಿ ಕಾಳಾವರ ಚಂಪಾ ಷಷ್ಠಿ ಮಹೋತ್ಸವ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಈ ಸಭೆಯಲ್ಲಿ ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್, ಗ್ರಾ.ಪಂ ಸದಸ್ಯರುಗಳು, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ, ಕೋಟಿಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ್ ಕಾರಂತ್, ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯವರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಊರ ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ವ್ಯವಸ್ಥಾಪನ ಸಮಿತಿ ಸದಸ್ಯರಾದ ರಂಜಿತ್ ಕುಮಾರ್ ಶೆಟ್ಟಿ ಸಲ್ವಾಡಿ ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ, ಉಪನ್ಯಾಸಕ ಕಾಳಾವರ ಉದಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Comments are closed.