ಕರ್ನಾಟಕ

ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್‌ ತೀರ್ಪು; ಯುವಕನ ಮೇಲಿನ ಕೇಸ್‌ ರದ್ದು

Pinterest LinkedIn Tumblr

ಬೆಂಗಳೂರು: ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆಯು ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದ್ದು ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದೆ.

‘ಪರಸ್ಪರ ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ. ನಿರ್ಧಿಷ್ಟ ಪ್ರಕರಣಗಳನ್ನು ಹೊರತುಪಡಿಸಿ, ಕ್ರಿಮಿನಲ್ ಕಾನೂನಿನಡಿಯಲ್ಲಿ ಇದನ್ನು ಅಪರಾಧವಾಗಿ ಪರಿವರ್ತಿಸಲು ಸಾಧ್ಯವಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಏನಿದು ಪ್ರಕರಣ: ಡೇಟಿಂಗ್ ಅಪ್ಲಿಕೇಶನ್ ನಲ್ಲಿ ಭೇಟಿಯಾದ ಮಹಿಳೆ ತನ್ನ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಪ್ರಕರಣ ರದ್ದು ಕೋರಿ 23 ವರ್ಷದ ಯುವಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ವಾಟ್ಸಪ್‌ನಲ್ಲಿ ಇಬ್ಬರು ಪರಸ್ಪರ ಚಾಟಿಂಗ್ ಮಾಡಿದ್ದು, ಹಾಗೇ ಫೋಟೋ, ವಿಡಿಯೋಗಳನ್ನೂ ವಿನಿಮಯ ಮಾಡಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಬಳಿಕ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಹೇಳಿ, ಆರೋಪಿ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ್ದಾರೆ.

ಕಳೆದ ವರ್ಷ ಡೇಟಿಂಗ್ ಆಪ್‌ನಲ್ಲಿ ಪರಿಚಯವಾಗಿದ್ದ  ಆಂಥೋಣಿ, ಒಯೋ ರೂಮ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಮಹಿಳೆ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಬಳಿಕ ಆಂಥೋಣಿ ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮಹಿಳೆ, ಆಂಥೋಣಿ ಜತೆ ಒಂದು ವರ್ಷದವರೆಗೂ ಪರಸ್ಪರ ಚಾಟಿಂಗ್, ಕಾಲ್​​ನಲ್ಲಿ ಮಾತನಾಡಿದ್ದು, ಇಬ್ಬರೂ ಆತ್ಮಿಯರಾಗಿದ್ದರು. ನಂತರ ಒಂದು ವರ್ಷದ 2024ರ ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಭೇಟಿಯಾಗಲು ನಿರ್ಧರಿಸಿ ರೆಸ್ಟೋರೆಂಟ್​ನಲ್ಲಿ ಊಟ ಮಾಡಿದ್ದರು. ನಂತರ ಯುವಕ ಮಹಿಳೆಯನ್ನು ಓಯೋ ರೂಮ್​ಗೆ ಕರೆದೊಯ್ದು ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಮರುದಿನ ಯುವಕ ಆಕೆಯನ್ನು ಅಪಾರ್ಟ್​ಮೆಂಟ್​ಗೆ ಡ್ರಾಪ್ ಮಾಡಿದ್ದ. ಮಹಿಳೆ ಅದೇ ದಿನ ವೈದ್ಯಕೀಯ ತಪಾಸಣೆ ಮಾಡಿಸಿ ಆಂಥೋಣಿ ವಿರುದ್ಧ ಕೋಣಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ನೀಡಿದ್ದರು. ಲೈಂಗಿಕ ಕ್ರಿಯೆಗೆ ಮುಂದಾದಾಗ ಒಪ್ಪಿಗೆ ನಿರಾಕರಿಸಿದ್ದಾಗಿ ಮಹಿಳೆ ದೂರು ನೀಡಿದ್ದು, ಒಪ್ಪಿಗೆ ಇಲ್ಲದೆಯೂ ಆತ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪಿಸಿದ್ದಾರೆ.

Comments are closed.