ಕುಂದಾಪುರ: ಬೆಂಗಳೂರಿನಲ್ಲಿ ವಿದ್ಯಾಬ್ಯಾಸ ಮಾಡಲು ಇಷ್ಟವಿಲ್ಲದ ಕಾರಣ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.26ರಂದು ಬೈಂದೂರು ತಾಲೂಕಿನ ಖಂಬದಕೋಣೆ ಹಳಗೇರಿ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಸ್ಕಂದ (16) ನೇಣಿಗೆ ಶರಣಾದ ವಿದ್ಯಾರ್ಥಿ.

ಅ. 26ರಂದು ಸಂಜೆ ಸ್ಕಂದ ತಾನು ಮನೆಯ ಮಲಗುವ ಕೋಣೆಯಲ್ಲಿ ಫ್ಯಾನಿಗೆ ಚೂಡಿದಾರದ ಶಾಲನ್ನು ಕಟ್ಟಿ ಕುತ್ತಿಗೆಗೆ ಉರುಳು ಹಾಕಿಕೊಂಡಿದ್ದರು. ಅದನ್ನು ಗಮನಿಸಿದ ಮನೆಯವರು ಬಾಗಿಲು ಒಡೆದು ಆತನನ್ನು ಕುಣಿಕೆಯಿಂದ ಇಳಿಸಿ ಚಿಕಿತ್ಸೆಗೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷಿಸಿದ ವೈದ್ಯರು ಸ್ಕಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
ಪ್ರೌಢಶಾಲೆ ವಿದ್ಯಾಭ್ಯಾಸವನ್ನು ಹುಟ್ಟೂರಿನಲ್ಲಿ ಪೂರೈಸಿದ್ದ ಸ್ಕಂದ ಅವರನ್ನು ಪಿಯುಸಿ ಶಿಕ್ಷಣಕ್ಕೆ ಬೆಂಗಳೂರಿನ ಕಾಲೇಜಿನಲ್ಲಿ ವಾಣಿಜ್ಯ ವಿಭಾಗಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಸಂಬಂಧಿಕರ ಮನೆಯಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದರು. ದೀಪಾವಳಿಯ ರಜೆಯಲ್ಲಿ ಮನೆಗೆ ಬಂದಿದ್ದ ಅವರು ರಜೆ ಮುಗಿದ ಬಳಿಕ ಮರಳುವ ಮನಸ್ಸು ಮಾಡಿರಲಿಲ್ಲ. ಭಾನುವಾರ ಸಂಜೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.