ಕುಂದಾಪುರ: ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಬ್ರಹ್ಮಾವರ ತಾಲೂಕ ಘಟಕದ ವತಿಯಿಂದ ಬ್ರಹ್ಮಾವರ ತಾಲೂಕು ಘಟಕದ ಕೋಶಾಧಿಕಾರಿಗಳು, ಕೋಟ ಮಣೂರು ಸರಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ನಿಕಟ ಪೂರ್ವ ಅಧ್ಯಕ್ಷರು, ಜಿಲ್ಲಾಮಟ್ಟದ ಅತ್ಯುತ್ತಮ ಸರಕಾರಿ ಶಾಲೆ ಮತ್ತು ಎಸ್ಡಿಎಂಸಿ ಪ್ರಶಸ್ತಿ ಪುರಸ್ಕೃತರಾದ ಕೋಟ ಜಯರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯ ಜಿಲ್ಲಾ ಮಹಾಪೋಷಕರಾದ ಶಂಕರ್ ಐತಾಳರು ಕೋಟ ಪಡುಕೆರೆಯ ಸರಕಾರಿ ಪ್ರೌಢಶಾಲೆಯಲ್ಲಿ ಸನ್ಮಾನಿಸಿ ಮಾತನಾಡಿ, ಸರಕಾರಿ ಶಾಲೆಗಳ ಬಗ್ಗೆ ಅಪಾರವಾದ ಗೌರವ, ಸಮನ್ವಯ ಕೇಂದ್ರ ವೇದಿಕೆಯ ಏಳಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವೇದಿಕೆಯ ಬೆಳವಣಿಗೆಗೆ ಬೇಕಾದ ಮೂಲ ಸೌಕರ್ಯಗಳನ್ನು ದಾನಿಗಳಿಂದ ಒದಗಿಸುವಲ್ಲಿ ಮಾಡಿರುವ ಪ್ರಾಮಾಣಿಕ ಪ್ರಯತ್ನವನ್ನು ಪರಿಗಣಿಸಿ ಈ ಸನ್ಮಾನ ನಡೆಸುತ್ತಿದ್ದೇವೆ. ಈ ಸೇವೆ ಹೀಗೆಯೇ ಮುಂದುವರೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ಕಾರ್ಯದರ್ಶಿ ದೀಪಾ ಮಹೇಶ್, ತಾಲೂಕು ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉಪಾಧ್ಯಕ್ಷ ಮಂಜುನಾಥ ಆಚಾರ್ಯ, ಸಹ ಕಾರ್ಯದರ್ಶಿ ಸವಿತಾ, ಸಂಘಟನಾ ಕಾರ್ಯದರ್ಶಿಗಳಾದ ಪವಿತ್ರಾ, ಕೃಷ್ಣ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಖಲೀಲ್ ಅಹಮದ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ
ಎಸ್.ವಿ ನಾಗರಾಜ್ ಪುರಸಭಾ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್, ಕಾಪು ತಾಲೂಕು ಉಸ್ತುವಾರಿ ಅಶ್ಫಾಕ್ ಮತ್ತು ಶಾಲಾ ಶಿಕ್ಷಕರು ಹಾಗೂ ಎಸ್ಡಿಎಂಸಿ ಸಮಿತಿಯವರು ಉಪಸ್ಥಿತರಿದ್ದರು.
Comments are closed.