ಉಡುಪಿ: ಮಣಿಪಾಲದ ಲಾಡ್ಜ್‌ವೊಂದರಲ್ಲಿ ಅಪ್ರಾಪ್ತೆಯೊಂದಿಗೆ ಕಟಪಾಡಿಯ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಸಿಕ್ಕಿಬಿದ್ದಿದ್ದು, ಈತನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪೊಕ್ಸೊ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿಯು ಅಪ್ರಾಪ್ತೆಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಬಾಲಕಿಯ ಪೋಷಕರು ನೇರವಾಗಿ ಪೊಲೀಸರೊಂದಿಗೆ ಲಾಡ್ಜ್‌ಗೆ ದಾಳಿ ನಡೆಸಿದ್ದಾರೆ. ಈ ವೇಳೆ ಆತ ಲಾಡ್ಜ್‌ಗೆ ವಯಸ್ಸಿನ ಮಾಹಿತಿ ಮುಚ್ಚಿಡಲು ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿರುವುದು ತಿಳಿದು ಬಂದಿದೆ.
ಈತನ ವಿರುದ್ಧ ಪ್ರಕರಣ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಇನ್ನೋರ್ವ ಸಂತ್ರಸ್ತೆಯೂ ದೂರು ದಾಖಲಿಸಿದ್ದಾಳೆ.
Comments are closed.