ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ ಹಿನ್ನಲೆಯಲ್ಲಿ ಶನಿವಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಸರ್ಕಾರ ರಜೆ ಘೋಷಣೆ ಮಾಡಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರ್ಕಾರವೇ ಲಿಖಿತ ಆದೇಶ ನೀಡಿದೆ ಬಂತೆ ನಕಲಿ ಆದೇಶ ಪ್ರತಿಯ ಫೋಟೋಗಳು ವೈರಲ್ ಆಗಿತ್ತು.

ಈ ಸುಳ್ಳು ಸುದ್ದಿ ವೈರಲ್ ಆಗುತ್ತಿದ್ದಂತೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದ್ದು, ‘ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು. ಸಾಮಾಜಿಕ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ’ ಎಂದು ಸ್ಪಷ್ಟನೆ ನೀಡಿದೆ. ಅದರಿಂದಾಗಿ ಶನಿವಾರ ಎಂದಿನಂತೆ ಶಾಲಾ ಕಾಲೇಜುಗಳು ಇರಲಿದೆ ಎಂದು ಸರ್ಕಾರ ತಿಳಿಸಿದೆ.
Comments are closed.