ಕರಾವಳಿ

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

Pinterest LinkedIn Tumblr

ಕುಂದಾಪುರ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್‌ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ.

ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ್ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿಗೌಡ ಅವರನ್ನು ನೇಮಿಸಲಾಗಿದೆ.

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ ಭಂಡಾರಿಯವರಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ ಹಾಗೂ ಕುಂದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು ಅವರು ಶುಭಕೋರಿದ್ದಾರೆ.

Comments are closed.