ಬೆಂಗಳೂರು: ಬೆಂಗಳೂರು ಸಂಚಾರ ಪೊಲೀಸರ ವಿಶಿಷ್ಠ ಚಿಂತನೆಯ ಕಾರ್ಯಕ್ರಮದ ಆಹ್ವಾನಕ್ಕೆ ಸ್ಪಂದಿಸಿದ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಎಸ್. ಅವರು ಒಂದು ದಿನ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರು.

ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಅವರೊಂದಿಗೆ ಚರ್ಚಿಸಿ, ಪೊಲೀಸ್ ಆ್ಯಪ್ ಮೂಲಕ ನೋಂದಾಯಿಸಿಕೊಂಡು, ಮಂಗಳವಾರ ಬೆಳಗ್ಗೆ ಬೆಂಗಳೂರು ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿ 9 ಗಂಟೆಯಿಂದ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು.
ಹೆಲ್ಮೆಟ್ ಧರಿಸದಿರುವುದು, ವಾಹನದಲ್ಲಿ ಹೆಚ್ಚು ಜನರನ್ನು ಸಾಗಿಸುವುದು ಮತ್ತು ಪಾದಚಾರಿ ಮಾರ್ಗದಲ್ಲಿ ವಾಹನ ನಿಲ್ಲಿಸುವಂತಹ ನಡವಳಿಕೆಗಳು ಸಂಚಾರಕ್ಕೆ ಅಡ್ಡಿಯಾಗುತ್ತವೆ ಎಂದು ಶಾಸಕ ಸುರೇಶ್ ಕುಮಾರ್ ವಿವರಿಸಿದರು.
ಬಳಿಕ ಸುರೇಶ್ ಕುಮಾರ್ ಅವರು ಮಾತನಾಡಿ, ‘ಸಂಚಾರ ಪೊಲೀಸರು ಯಾವೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಏನೆಲ್ಲಾ ಸಮಸ್ಯೆಗಳಿವೆ ಎಂಬುದು ನನ್ನ ಅನುಭವಕ್ಕೆ ಬಂದಿದೆ. ಪ್ರತಿ ಸೋಮವಾರ ಒಂದು ಗಂಟೆ ಸಂಚಾರಿ ಪೊಲೀಸರ ಕಾರ್ಯ ನಿರ್ವಹಣೆಗೆ ಸಹಾಯ ಮಾಡುವುದಾಗಿ ಅವರು ತಿಳಿಸಿದರು.
Comments are closed.