ಕುಂದಾಪುರ: ಬಳ್ಳಾರಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ಇದರಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕನ ನಡೆಸಿ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ನೇಮಕ ಮಾಡಿರುವ ನಿಯೋಗದಲ್ಲಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರಿಗೆ ಸ್ಥಾನ ನೀಡಲಾಗಿದೆ.

ರಾಜ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಸಂಸದ ಕುಮಾರ್ ನಾಯಕ್, ಚಳ್ಳಿಕೆರೆ ಶಾಸಕ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯರುಗಳಾದ ಜಕ್ಕಪ್ಪನವರು ಹಾಗೂ ಬಸವನಗೌಡ ಬಾದರ್ಲಿ ಅವರು ನಿಯೋಗದಲ್ಲಿ ಇದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಶನಿವಾರ ಬಳ್ಳಾರಿಗೆ ತೆರಳಿದ್ದ ನಿಯೋಗದ ಸದಸ್ಯರು, ಪರಿಸ್ಥಿತಿ ಅವಲೋಕನ ನಡೆಸಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.
ಪಕ್ಷದ ಹಿರಿಯ ಮುಖಂಡರಾಗಿರುವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಇತ್ತೀಚಿನ ದಿನಗಳಲ್ಲಿ ಪಕ್ಷ ಸಂಘಟನೆ ಹಾಗೂ ಸೂಕ್ಷ್ಮ ವಿಚಾರಗಳ ಕಾರ್ಯಗಳಲ್ಲಿ ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ತಮಿಳುನಾಡು ಅಂತರಿಕ ಚುನಾವಣೆಯಲ್ಲಿಯೂ ಎಐಸಿಸಿ ವೀಕ್ಷಕರ ಜವಾಬ್ದಾರಿ ನೀಡಿತ್ತು ಎನ್ನುವುದು ಉಲ್ಲೇಖನೀಯ.
Comments are closed.