ಕರ್ನಾಟಕ

ಮುಂಡಗೋಡ ಪೊಲೀಸ್ ಠಾಣೆಯ ಪಿಎಸ್ಐ 33 ವರ್ಷದ ಯಲ್ಲಾಲಿಂಗ ಕುನ್ನೂರು ನಿಧನ

Pinterest LinkedIn Tumblr

ಕಾರವಾರ: ಅನಾರೋಗ್ಯದಿಂದಾಗಿ ಉತ್ತರ ಕನ್ನಡದ ಮುಂಡಗೋಡ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ 33 ವರ್ಷದ ಯಲ್ಲಾಲಿಂಗ ಕುನ್ನೂರು ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.

ಪ್ರಾಮಾಣಿಕ ಅಧಿಕಾರಿಯಾಗಿದ್ದ ಕಲಬುರಗಿಯ ಜೇವರ್ಗಿಯ ಯಲ್ಲಾಲಿಂಗ ಅನೇಕ ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅವರ ನಿಧನಕ್ಕೆ ಪೊಲೀಸರು, ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Comments are closed.