ಕುಂದಾಪುರ: ಕಳೆದ ವರ್ಷ ಅಮಾಸೆಬೈಲು ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಆಟೋ ರಿಕ್ಷಾವೊಂದರಲ್ಲಿಠಠ ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಗೆ ಲೈಂಗಿಕವಾಗಿ ಪೀಡಿಸಿದ ಆರೋಪ ಸಾಭೀತಾಗಿದ್ದು ಪ್ರಕರಣದಲ್ಲಿ ಇಬ್ಬರನ್ನು ದೋಷಿಗಳೆಂದು ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ತೀರ್ಪು ಪ್ರಕಟಿಸಿದ್ದಾರೆ.

ಪ್ರಶಾಂತ ನಾಯ್ಕ್(28), ಶರತ್ ಶೆಟ್ಟಿ (32) ಈ ಪ್ರಕರಣದ ಅಪರಾಧಿಗಳಾಗಿದ್ದು 5 ವರ್ಷ ಕಾರಾಗ್ರಹ ಶಿಕ್ಷೆ, 5 ಸಾವಿರ ದಂಡ, ದಂಡ ತೆರದಿದ್ದಲ್ಲಿ 5 ತಿಂಗಳ ಸಜೆ ವಿಧಿಸಿದ್ದು ನೊಂದ ಬಾಲಕಿಗೆ 50 ಸಾವಿರ ರೂ. ಸರಕಾರ ಪರಿಹಾರ ನೀಡಬೇಕೆಂದು ನ್ಯಾಯಾಲಯವು ಆದೇಶಿಸಿದೆ.
ಘಟನೆ ವಿವರ: ಶಾಲೆಯಿಂದ ವಾಪಾಸ್ಸಾಗುವಾಗ ರಿಕ್ಷಾದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದ್ದು ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025 ರ ಜುಲೈ ತಿಂಗಳಿನಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಅವರು ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಒಟ್ಟು 32 ಸಾಕ್ಷ್ಯಾಧಾರಗಳಿದ್ದು ನ್ಯಾಯಾಲಯವು 7 ತಿಂಗಳಿನಲ್ಲಿ ತ್ವರಿತಗತಿಯಲ್ಲಿ ಪ್ರಕರಣದ ಕೂಲಂಕುಷ ವಿಚಾರಣೆ ನಡೆಸಿ ಆರೋಪಿಗಳು ದೋಷಿಗಳೆಂದು ತೀರ್ಪು ನೀಡಿದೆ.
ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದಿಸಿದ್ದರು.
Comments are closed.