ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಫೆ.7 ಶನಿವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 91 ವರ್ಷ ಪ್ರಾಯವಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

ಅಜಾತಶತ್ರುವಿನಂತೆ ಬಾಳಿದ್ದ ಬಿ. ಅಪ್ಪಣ್ಣ ಹೆಗಡೆ ಅವರು 1983 ರಿಂದ 1985 ರವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಶಾಸಕರಾಗಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿಯಾಗಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಜನಜಾಗೃತಿ ವೇದಿಕೆ ಸಹಿತ ಅನೇಕ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
Comments are closed.