ಕರ್ನಾಟಕ

ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ ವಿಧಿವಶ

Pinterest LinkedIn Tumblr

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ (93 ) ಅವರು ನಿಧನರಾಗಿದ್ದಾರೆ.

ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ. ರಾಮಯ್ಯ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪುತ್ರ ಡಾ. ಬಾಲಾಜಿ ತಿಳಿಸಿದ್ದಾರೆ.

1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ ಅವರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗು ಸೊಸೆಯಂದಿರು ಹಾಗು ಮೊಮ್ಮಕಳನ್ನು ಅಗಲಿದ್ದಾರೆ.

ಪಿ ರಾಮಯ್ಯ ಅವರು, “ದಿ ಹಿಂದೂ ” ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೆ ರಾಮಯ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ,ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದರು.

 

Comments are closed.