ಕರಾವಳಿ

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಅಚ್ಲಾಡಿ ಪುನರಾಯ್ಕೆ, ಚಂದ್ರಶೇಖರ್ ಬೀಜಾಡಿ ಪ್ರಧಾನ ಕಾರ್ಯದರ್ಶಿ

Pinterest LinkedIn Tumblr

ಬ್ರಹ್ಮಾವರ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬ್ರಹ್ಮಾವರ ಗಜಾನನ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಪ್ರಜಾವಾಣಿಯ ಶೇಷಗಿರಿ ಭಟ್, ಕೋಶಾಧಿಕಾರಿಯಾಗಿ ವಿಜಯವಾಣಿಯ ರವೀಂದ್ರ ಕೆ., ಕಾರ್ಯದರ್ಶಿಯಾಗಿ ಹರೀಶ್ ಕಿರಣ್ ತುಂಗ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಬಂಡಿಮಠ ಶಿವರಾಮ ಆಚಾರ್ಯ, ಉದಯ ಆಚಾರ್ಯ, ಅಲ್ತಾರು ನಾಗರಾಜ್, ಪ್ರವೀಣ್ ವಿ., ಅನಂತ ನಾಯಕ್ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಸಹಕರಿಸಿದರು.

Comments are closed.