ಕರಾವಳಿ

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ಶ್ರೀಮನ್ನಾಗಮಂಡಲ’: ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Pinterest LinkedIn Tumblr

ಉಡುಪಿ (ಮುನಿಯಾಲು): ಕೃಷಿಲೋಕ ಮುನಿಯಾಲಿನ ಗೋಧಾಮವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದು ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ‌ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 21ರ ತನಕ ನಡೆಯುವ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲಕ್ಕೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಫೆ.19 ಗುರುವಾರದಂದು ಭಕ್ತಿ ವೈಭವದ ಚಾಲನೆ ನೀಡಲಾಯಿತು.

ಮುನಿಯಾಲು ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ. ಜಿ ರಾಮಕೃಷ್ಣ ಆಚಾರ್ ಮತ್ತು ಕುಟುಂಬಸ್ಥರು ವಿದ್ವಾನ್‌ ಕೊರಂಗ್ರಪಾಡಿ ಕುಮಾರಗುರು ತಂತ್ರಿಗಳ ಸಹಿತ ಋತ್ವಿಜರನ್ನು ಸ್ವಾಗತಿಸಿದರು. 6 ಕಾಯಿ ಗಣಯಾಗ, ಉಗ್ರಾಣ ಮುಹೂರ್ತ, ಅನ್ನಾರಾಧನ ಮುಹೂರ್ತ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳು ವಿದ್ವಾನ್‌ ಕೊರಂಗ್ರಪಾಡಿ ಕುಮಾರಗುರು ತಂತ್ರಿಗಳ ನೇತ್ರತ್ವದಲ್ಲಿ ವಾಸುದೇವ ಭಟ್‌ ಅವರ ಸಹಯೋಗದಲ್ಲಿ ನಡೆಯಿತು.

ಮುನಿಯಾಲು ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ. ಜಿ ರಾಮಕೃಷ್ಣ ಆಚಾರ್, ಸವಿತಾ ಆರ್‌ ಆಚಾರ್‌, ಅನುಷಾ ಆಚಾರ್‌, ಪ್ರಜ್ವಲ್‌, ಆಚಾರ್‌, ಪೂಜಾ ಆಚಾರ್‌, ತೇಜಸ್‌ ಆಚಾರ್‌, ರಕ್ಷತ್‌ ಆಚಾರ್‌, ಹಾಗೂ ಕುಟುಂಬಸ್ಥರು, ಶ್ರೀಮನ್ನಾಗಮಂಡಲ ಸೇವಾ ಸಮಿತಿಯ ಅಧ್ಯಕ್ಷ ದೇವಿಪ್ರಸಾದ ಶೆಟ್ಟಿ ಸಾಣೂರುಗುತ್ತು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ ಶೆಟ್ಟಿ ಕಾರ್ಕಳ, ದಾಮೋಧರ ಶರ್ಮ ಬಾರ್ಕೂರು, ಅರವಿಂದ ಆಚಾರ್ಯ ಬೆಳುವಾಯಿ, ಪ್ರಭಾಕರ ಆಚಾರ್ಯ ಗುಡ್ಡೆಯಂಗಡಿ, ಮಾರ್ಗದರ್ಶಕರಾದ ಸುಕೇಶ ಹೆಗ್ಡೆ ಕಡ್ತಲ, ಮುನಿಯಾಲು ದಿನೇಶ ಪೈ, ಸಂತೋಷ ಆಮೀನ್‌, ಜ್ಯೋತಿ ಹರೀಶ್‌, ನಾಗಪ್ಪಯ್ಯ ಆಚಾರ್ಯ ಗುಜ್ಜಾಡಿ, ಪ್ರಮುಖರಾದ ಡಾ.ಹರೀಶ ಆಚಾರ್ಯ ಜಲಕದಕಟ್ಟೆ ಮಂಗಳೂರು, ಉಪೇಂದ್ರ ಆಚಾರ್ಯ ಪೆರ್ಡೂರು, ಡಾ.ಕೆ.ಸುದರ್ಶನ್‌ ಹೆಬ್ಬಾರ್‌ ಮುನಿಯಾಲು, ಗೋಪಿನಾಥ ಭಟ್‌ ಮುನಿಯಾಲು, ಬೆಳುವಾಯಿ ಸೀತಾರಾಮ ಆಚಾರ್ಯ, ಸಮಿತಿಯ ಸದಸ್ಯರು,ಪದಾಧಿಕಾರಿಗಳು, ಗಣ್ಯರು, ಪ್ರಮುಖರು, ಸಂಘಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.

Comments are closed.