ಕುಂದಾಪುರ: ಕಾಂಗ್ರೆಸ್ ಹಿರಿಯ ಮುಖಂಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರ ಆರೋಗ್ಯ ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸಿ ಕುಂದೇಶ್ವರದಲ್ಲಿ ದೇವಸ್ಥಾನದಲ್ಲಿ ಸೋಮವಾರ ಕುಂದಾಪುರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ದೇವಕಿ ಸಣ್ಣಯ್ಯ , ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ತಾ, ಕುಂದಾಪುರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ ಶೆಟ್ಟಿ,ಕುಂದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು, ಯುವ ನಾಯಕ ಸುನಿಲ್ ಕೋಡಿ, ಆನಗಳ್ಳಿ ಗ್ರಾಮ ಪಂಚಾಯಿತ ಮಾಜಿ ಅಧ್ಯಕ್ಷೆ ಸವಿತಾ ಬಿಲ್ಲವ, ಕೋಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಶೋಕ್ ಭಂಡಾರಿ, ಮಾಜಿ ಉಪಾಧ್ಯಕ್ಷೆ ಸೌಮ್ಯ ಮೋಗವೀರ ಹಾಗೂ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಾಸುದೇವ ಯಡಿಯಾಳ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವಿಠಲ ಕಾಂಚನ, ನಾಗರಾಜ ನಾಯ್ಕ, ಸೀಮಾ ಚಂದ್ರ ಪೂಜಾರಿ, ಗಿರಿಜಾ ಉದಯ ಹವಾಲ್ದಾರ್ , ಸುಮನ್ ಶೆಟ್ಟಿ ಆವರ್ಸೆ ರವೀಂದ್ರ ಶೆಟ್ಟಿ, ನಿನಾದ್ ಶೆಟ್ಟಿ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.