ಕರಾವಳಿ

ಕುಂದಾಪುರದಿಂದ ಶಿವಮೊಗ್ಗದತ್ತ ಸಾಗುತ್ತಿದ್ದ ಖಾಸಗಿ ಬಸ್ಸು ಹುಲಿಕಲ್ ಘಾಟ್‌ನಲ್ಲಿ  ಬೆಂಕಿಗಾಹುತಿ: ಪ್ರಯಾಣಿಕರು ಪಾರು

Pinterest LinkedIn Tumblr

ಕುಂದಾಪುರ: ಕುಂದಾಪುರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಖಾಸಗಿ (ಶ್ರೀ ದುರ್ಗಾಂಬಾ) ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಬಸ್ ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದರಿಂದ ಸಂಭವ್ಯ ಭಾರೀ ಅವಘಡ ತಪ್ಪಿದೆ. ಈ ಘಟನೆ ಹುಲಿಕಲ್ ಬಾಳೆಬರೆ ಘಾಟಿಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

35ಕ್ಕೂ ಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದ ಬಸ್‌ನ ಮುಂಭಾಗದಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದ್ದು ಪ್ರಯಾಣಿಕರನ್ನು ಚಾಲಕ-ನಿರ್ವಾಹಕ ಕೆಳಗಡೆ ಇಳಿಸಿದ್ದಾರೆ ಎನ್ನಲಾಗಿದೆ. ಕ್ಷಣಾರ್ಧದಲ್ಲೆ ಬೆಂಕಿ ಇಡೀ ಬಸ್ ವ್ಯಾಪಿಸಿ ಸಂಪೂರ್ಣ ಸುಟ್ಟುಹೋಗಿದೆ. ಈ ದೃಶ್ಯವನ್ನು ಸ್ಥಳೀಯರು ಸೋಶಿಯಲ್ ಮಿಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಬಸ್ ಸಂಪೂರ್ಣ ಸುಟ್ಟುಕರಕಲಾದ ಬಗ್ಗೆ ಮಾಹಿತಿ ತಿಳಿದುಬಂದಿದೆ.

Comments are closed.