ಕರಾವಳಿ

ಕುಂದಾಪುರ: ಮೆಟ್ಕಲ್‌ಗುಡ್ಡಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು

Pinterest LinkedIn Tumblr

ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1 ರವಿವಾರ ನಡೆದಿದೆ.

ಕುಂದಾಪುರದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ ಶುಭಶ್ರೀ ಕಾರಂತ್ (53) ಸಾವನ್ನಪ್ಪಿದವರು.

ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್‌ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದುಬಂದಿದೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Comments are closed.