ಕರಾವಳಿ

ಕಲ್ಲಂಗಡಿ ಬೆಳೆ ಹಾನಿ; ರೈತರಿಗೆ ಸೂಕ್ತ ಪರಿಹಾರ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆಗ್ರಹ

Pinterest LinkedIn Tumblr

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರ ವಾಪ್ತಿಯಲ್ಲಿ ಪ್ರಸ್ತುತ ವರ್ಷ ಕಲ್ಲಂಗಡಿ ಹಣ್ಣಿನ ಮೊದಲ ಬೆಳೆಗೆ ಸೊರಗು ರೋಗ ತಗುಲಿ ಬೆಳೆ ಹಾನಿ ಸಂಭವಿಸಿರುವುದರಿಂದ ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ ಹಾಗೂ ಕಲ್ಲಂಗಡಿ ಬೆಳೆಗಾರರ ಹಿತ ಕಾಪಾಡಲು ಹಾಗೂ ಉತ್ತಮ ದರವನ್ನು ದೊರಕಿಸಿಕೊಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೆಂಗಳೂರಿನಲ್ಲಿ ಇಂದು ನಡೆದ ವಿಧಾನಸಭಾ ಅಧಿವೇಶದಲ್ಲಿ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಒತ್ತಾಯಿಸಿದರು.

ಗಂಟಿಹೊಳೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ 180 ಎಕ್ರೆ ಕಲ್ಲಂಗಡಿ ಬೆಳೆ ಪ್ರದೇಶವಿದ್ದು ಪ್ರಸ್ತುತ ವರ್ಷ ಕಲ್ಲಂಗಡಿ ಹಣ್ಣಿನ ಮೊದಲ ಬೆಳೆಗೆ ಸೊರಗು ರೋಗ ತಗುಲಿ ಕಟಾವು ಹಂತದಲ್ಲಿ 40 ಎಕ್ರೆ ಪ್ರದೇಶದಲ್ಲಿ ರೋಗಬಾಧೆ ಕಂಡು ಬಂದಿರುವುದಾಗಿ ಅಂದಾಜಿಸಲಾಗಿದೆ ಎಂದರು.

ರೋಗ ಕಂಡು ಬಂದಿರುವ ತೋಟಗಳಲ್ಲಿ ಶೇ.40ರಿಂದ 3 50ರಷ್ಟು ಇಳುವರಿ ಕಡಿಮೆಯಾಗಿರುವುದಾಗಿ ಅಂದಾಜಿಸ ಲಾಗಿದೆ. ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡುವ ಕಾರ್ಯಕ್ರಮ ಇಲಾಖೆಯಲ್ಲಿ ಇರುವುದಿಲ್ಲ ಹಾಗೂ ಕಲ್ಲಂಗಡಿ ಬೆಳೆಗಾರರ ಹಿತ ಕಾಪಾಡಲು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಯಡಿ ಹೊಸ ಪ್ರದೇಶ ವಿಸ್ತರಣೆಗೆ ಪ್ರತಿ ಹೆಕ್ಟೇರ್‌ಗೆ ರೂ. 0.60 ಲಕ್ಷ ಘಟಕ ವೆಚ್ಚದ ಶೇ.40ರಂತೆ ರೂ.0.24 ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದರು.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು 2 ಹೆಕ್ವೆರ್‌ವರೆಗೆ ಶೇ.90 ರಷ್ಟು ಮತ್ತು 3ರಿಂದ 5 ಹೆಕ್ವೆರ್‌ವರೆಗೆ ಶೇ.45ರಷ್ಟು ಸಹಾಯಧನ ನೀಡಲಾಗುತ್ತಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ಲಾಸ್ಟಿಕ್ ಹೊದಿಕೆ ಹೊದಿಸಲು ಪ್ರತಿ ಹೆಜ್ಜೆರ್‌ಗೆ ರೂ. 0.40 ಲಕ್ಷ ಗಳ ಘಟಕ ವೆಚ್ಚದ ಶೇ.50ರಂತೆ 0.20 ಲಕ್ಷ ಸಹಾಯಧನ ನೀಡಲಾಗುತ್ತಿದೆ.

ಅಲ್ಲದೇ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮಗ್ರ ಪೋಷಕಾಂಶ, ಕೀಟ/ರೋಗಗಳ ನಿರ್ವಹ ಣೆಗೆ ಸಹಾಯಧನ ಮತ್ತು ಕಲ್ಲಂಗಡಿ ಸೇರಿದಂತೆ ತೋಟಗಾರಿಕಾ ಉತ್ಪನ್ನಗಳ ದರ ಕುಸಿತದ ಸಂದರ್ಭದಲ್ಲಿ ಬೆಂಬಲ ಬೆಲೆ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಸಚಿವರು ಶಾಸಕರ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ 15651.65 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಬೆಳೆಯುತಿದ್ದು, ಉಡುಪಿ ಜಿಲ್ಲೆಯಲ್ಲೂ 230 ಎಕರೆ ವಿಸ್ತೀರ್ಣದಲ್ಲಿ ಈ ಬೆಳೆಯನ್ನು ಬೆಳೆಯಲಾಗುತ್ತಿದೆ ಎಂದು ಸಚಿವರು ನುಡಿದರು. ಕಲ್ಲಂಗಡಿ ಬೆಳೆಗೆ ಸೊರಗು ರೋಗ, ಕೀಟ ಬಾಧೆ ಸೇರಿದಂತೆ ಇನ್ನಿತರ ರೋಗ ನಿವಾರಣೆಗೆ ಬೆಳೆಗಾರರಿಗೆ ಅಗತ್ಯ ಮಾಹಿತಿಗಳನ್ನೊಳಗೊಂಡ ಮಾಹಿತಿ ಕೈಪಿಡಿ ಒದಗಿಸುವಂತೆ ಇದೇ ಸಂದರ್ಭದಲ್ಲಿ ಶಾಸಕರು ಸಚಿವರಿಗೆ ಮನವಿ ಮಾಡಿದರು.

Comments are closed.