ಕರಾವಳಿ

5 ಪ್ರಕರಣವಿರುವ ರೌಡಿಶೀಟರ್ ನೌಫಿಲ್, 4 ಪ್ರಕರಣವಿರುವ ಸುಹಾನ್ ಪೂಜಾರಿಯನ್ನು ಗಡಿಪಾರು ಮಾಡಿ ಎಸ್ಪಿ ಹರಿರಾಂ ಶಂಕರ್ ಆದೇಶ

Pinterest LinkedIn Tumblr

ಉಡುಪಿ: ಜಿಲ್ಲೆಯ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಮ್ಮದ್‌ ನೌಫಿಲ್‌ ಹಾಗೂ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಹಾನ್‌ ಪೂಜಾರಿ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾಪು ಕಳತ್ತೂರು ನಿವಾಸಿ ಮಹಮ್ಮದ್‌ ನೌಫಿಲ್‌, ಈತನ ವಿರುದ್ಧ 5 ಪ್ರಕರಣ ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ.

ಮಲ್ಪೆ ಠಾಣಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಮಲ್ಪೆ ಕೊಡವೂರು ನಿವಾಸಿ ಸುಹಾನ್‌ ಪೂಜಾರಿ ಈತನ ವಿರುದ್ಧ 4 ಪ್ರಕರಣ ದಾಖಲಾಗಿದೆ.

ಮಹಮ್ಮದ್‌ ನೌಫಿಲ್‌ ಈತನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಸುಹಾನ್‌ ಪೂಜಾರಿ ಈತನನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Comments are closed.