ಕರಾವಳಿ

ಉಡುಪಿ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

Pinterest LinkedIn Tumblr

ಉಡುಪಿ: ಪೊಲೀಸ್‌ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂಧಿಗಳಿಗೆ ನೀಡುವ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಮೂವರು ಪೊಲೀಸರಿಗೆ ನೀಡಲಾಗಿದೆ.

ಉಡುಪಿ ನಗರ ಠಾಣೆಯ ಎಎಸ್‌ಐ ಚಂದ್ರ ಶೆಟ್ಟಿ ಪಡೆದುಕೊಂಡಿದ್ದಾರೆ. ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಎಚ್‌ಸಿ ಸಂತೋಷ್‌ ಶೆಟ್ಟಿ, ಸಶಸ್ತ್ರ ಮೀಸಲು ಪೊಲೀಸ್‌ ಪಡೆ ಅವರು ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸಲ್ಲಿಸಿದ ವಿಶಿಷ್ಠ ಸೇವೆಗಾಗಿ ಈ ಬಾರಿ ಚಿನ್ನದ ಪದಕವನ್ನ ಪಡೆದಿದ್ದಾರೆ.

ಕಾರ್ಕಳದಲ್ಲಿರುವ ನಕ್ಸಲ್‌ ನಿಗ್ರಹ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಆರ್.ಎಸ್‌ಐ ಮಂಜುನಾಥ ದೇವರಮನೆ,  ಅವರು ನಕ್ಸಲ್‌ ನಿಗ್ರಹ ಪಡೆಯಲ್ಲಿ ನಿರ್ವಹಿಸದ ಅತ್ಯುನ್ನತ ಸೇವೆಗಾಗಿ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿದ್ದಾರೆ.

ಪದಕ ಪುರಸ್ಕ್ರತರನ್ನು ಪೊಲೀಸ್‌ ಅಧೀಕ್ಷಕರು ಹಾಗೂ ಉಡುಪಿ ಜಿಲ್ಲೆ ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್‌ ನಿಗ್ರಹ ಪಡೆಯ ಪ್ರಭಾರ ಪೊಲೀಸ್‌ ಅಧೀಕ್ಷಕ ಹರಿರಾಮ್‌ ಶಂಕರ್ ಇವರು ಅಭಿನಂದಿಸಿದ್ದಾರೆ.

Comments are closed.