ಉಡುಪಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹರಿರಾಂ ಶಂಕರ್ ಅವರು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ.
ವಿಜೇತ ಎಂಬಾತ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರ ಗ್ರಾಮದ ಪಿತ್ರೋಡಿ ನಿವಾಸಿಯಾಗಿದ್ದು. ಈತನ ಮೇಲೆ 4 ಕೊಲೆ ಯತ್ನ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿವೆ. ಈತನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಆರೀಫ್ ಸಾಹೇಬ್ ಎಂಬಾತ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿ ನಿವಾಸಿಯಾಗಿದ್ದು. ಈತನ ಮೇಲೆ 5 ಕೊಲೆ ಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆಯ ಪ್ರಕರಣಗಳಿದ್ದು, ಈತನ ಹೆಸರಿನಲ್ಲಿ ರೌಡಿ ಶೀಟ್ ತೆರೆಯಲಾಗಿದೆ. ಈತನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
Comments are closed.