ಕರಾವಳಿ

ನಾಗಮಂಡಲಕ್ಕೆ ತೆರಳಿದ್ದಾಗ ಮನೆ ಕಳವು: ಆರೋಪಿಯ ಬಂಧನ; 14ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ವಶ

Pinterest LinkedIn Tumblr

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ನಗನಗದು ವಶಪಡಿಸಿಕೊಂಡಿದ್ದಾರೆ.

ಬಾರಕೂರಿನ ಪ್ರವೀಣ್ ಕುಮಾರ್ ಕೆ. ಬಂಧಿತ ಆರೋಪಿ. ಈತನಿಂದ ಕಳವು ಮಾಡಲಾದ 14 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ 7500ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಾರಕೂರು ಹೇರಾಡಿ ಐಟಿಐ ಕಾಲೇಜಿನ ಬಳಿ ನಿವಾಸಿ ಎಂ.ಮಂಜುನಾಥ ರಾವ್ ಎಂಬವರು ಪತ್ನಿಯೊಂದಿಗೆ ನಾಗಮಂಡಲ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ಮಾ.6ರಂದು ನುಗ್ಗಿದ ಕಳ್ಳರು, 14,67,000ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ನಿರ್ದೇಶನದಂತೆ ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕ ಗೋಪಿಕೃಷ್ಣ ಬ್ರಹ್ಮಾವರ ಎಸ್ಸೆ ಅಶೋಕ್ ಮಾಳಾಬಗಿ ಹಾಗೂ ಅಪರಾಧ ಪತ್ತೆ ಸಿಬ್ಬಂದಿ ಕಿರಣ್, ಸಿದ್ದಪ್ಪ ಸಕನಳ್ಳಿ, ಸುರೇಶ್‌ ಬಾಬು, ಎಎಸ್ಸೆ ಕೃಷ್ಣಪ್ಪ, ವಿಶ್ವನಾಥ ಶೆಟ್ಟಿ, ಜಯಶೀಲಾ ಈ ಕಾರ್ಯಾಚರಣೆ ನಡೆಸಿದ್ದಾರೆ.

Comments are closed.