ಕರಾವಳಿ

ಬೆಂಗಾವಲು ಕಾರಿನೊಂದಿಗೆ ಗೂಡ್ಸ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ: ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಆರೋಪಿಗಳ ಬಂಧನ

Pinterest LinkedIn Tumblr

ಉಡುಪಿ: ಬೆಂಗಾವಲು ಕಾರಿನೊಂದಿಗೆ ಗೂಡ್ಸ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಮಾಸೆಬೈಲು ಪೊಲೀಸರು ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಬಂಧಿಸಿದ್ದಾರೆ.

ಬೆಳಗಾಂ ಜಿಲ್ಲೆಯ ರಾಮದುರ್ಗಾದ ಮುಸ್ತಾಕ್ ಹುಸೇನ್(29), ಸಲೀಂ ಹುಸೇನ್‌ ಸಾಬ್ ನದಾಫ್(33), ಕಂಡೂರು ಮೂಲದ ಹಾಲಿ ಶಿರೂರು ನಿವಾಸಿ ನದೀಂ ಅಬ್ದುಲ್ ಖಾದರ್(34) ಬಂಧಿತ ಆರೋಪಿಗಳು.

ಹುಲಿಕಲ್ ಘಾಟಿ ಕಡೆಯಿಂದ ಹೊಸಂಗಡಿ ಚೆಕ್ ಪೋಸ್ಟ್ ಕಡೆಗೆ ಬರುತ್ತಿದ್ದ ವಾಹನವನ್ನು ತಡೆದು ತಾಪಸಣೆ ಮಾಡಿ ದಾಗ ಮೂರು ಎತ್ತು ಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಇದರಲ್ಲಿದ್ದ ಒಂದು ಲಕ್ಷ ರೂ. ಮೌಲ್ಯದ ಮೂರು ಎತ್ತುಗಳನ್ನು, 4ಲಕ್ಷ ರೂ. ಮೌಲ್ಯದ ವಾಹನ ಮತ್ತು ಬೆಂಗಾವಲಾಗಿದ್ದ 5ಲಕ್ಷ ರೂ. ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಕಾರಿನಲ್ಲಿದ್ದ ಇಬ್ಬರು ಇಳಿದು ಓಡಿ ಹೋಗಿದ್ದು, ಓರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Comments are closed.