ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮೀಣ ಜನ- ಜೀವನದ ಅತ್ಯುತ್ತಮ ವರದಿಗಳಿಗೆ ಕೊಡಮಾಡುವ ಮಂಡಿಬೆಲೆ ಶಾಮಣ್ಣ ಪ್ರಶಸ್ತಿಯನ್ನು ಕುಂದಾಪುರದ ಉದಯವಾಣಿ ಹಿರಿಯ ವರದಿಗಾರ ಪ್ರಶಾಂತ್ ಪಾದೆಯವರಿಗೆ ಬೀದರ್‌ನಲ್ಲಿ ರವಿವಾರ ಸಂಜೆ ನಡೆದ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 40 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್, ವಿಪಕ್ಷ ನಾಯಕ ಆರ್. ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
Comments are closed.