ಉಡುಪಿ: ಪತ್ರಿಕೋದ್ಯಮದಲ್ಲಿ ದೀರ್ಘಕಾಲದ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅವರು ಎ.19 ರವಿವಾರದಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕಳೆದ ಕೆಲವು ದಿನಗಳಿಂದ ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದೂ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಬಳಿಕ ದಿ ನ್ಯೂ ಇಂಡಿಯನ್ ಎಕ್ಸೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.
ಇವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
Comments are closed.