ಕರ್ನಾಟಕ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ಮನೆಯಲ್ಲಿದ್ದಾಗಲೇ ದಿಲೀಪ್ ರಾಜ್ ಅವರಿಗೆ ಹೃದಾಯಾಘ ಆಗಿತ್ತು.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಈ ವೇಳೆಗೆ ಅವರು ಇಹಲೋಕ ತ್ಯಜಿಸಿದ್ದರು. ದಿಲೀಪ್ ರಾಜ್ ನಿಧನಕ್ಕೆ  ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.

Comments are closed.