ಕರ್ನಾಟಕ

ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ ರೂ.3 ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ!

Pinterest LinkedIn Tumblr

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್‌ಗೆ ರೂ.3ರಷ್ಟು ಹೆಚ್ಚಳ ಮಾಡಲಾಗಿದೆ. ನಾಲ್ಕು ವರ್ಷಗಳ ಬಳಿಕ ಸರ್ಕಾರಿ ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆಗೆ ಮುಂದಾಗಿದ್ದು ಜನತೆಗೆ ಮತ್ತೊಂದು ಬೆಲೆ ಶಾಕ್ ನೀಡಿದೆ. ಇಂದಿನಿಂದ (ಮೇ.15 ಶುಕ್ರವಾರ) ಪರಿಷ್ಕೃತ ದರ ಜಾರಿಯಾಗಲಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ರೂ.94.77ರಿಂದ ರೂ.97.77ಕ್ಕೆ ಏರಿಕೆಯಾದರೆ, ಡೀಸೆಲ್ ದರವು ರೂ.89.67ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸಂಸ್ಥೆಗಳು ಹೊಸ ದರ ಜಾರಿಗೆ ತಂದಿವೆ.

Comments are closed.