ಕುಂದಾಪುರ: ಕೊಡಚಾದ್ರಿಯಿಂದ ಕೊಲ್ಲೂರಿನತ್ತ ಪ್ರವಾಸಿಗರನ್ನು ಕರೆತರುತ್ತಿದ್ದ ಜೀಪು ಹಾಗೂ ಕೊಲ್ಲೂರು ಕಡೆಯಿಂದ ನಾಗೋಡಿ ಘಾಟಿಯತ್ತ ಸಾಗುತ್ತಿದ್ದ ಇನ್ಸುಲೆಟರ್ ವಾಹನದ ನಡುವೆ ಕೊಲ್ಲೂರು ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ಇನ್ನೋರ್ವರಿಗೆ ಗಂಭೀರ ಗಾಯಗಳಾಗಿದೆ. ಹಲವರು ಗಾಯಗೊಂಡ ಘಟನೆ ಪ್ರಾಥಮಿಕವಾಗಿ ವರದಿಯಾಗಿದೆ.

ಮೃತರು ಹಾಗೂ ಗಾಯಾಳುಗಳು ಕೇರಳ ಮೂಲದವರೆಂದು ಸದ್ಯ ತಿಳಿದುಬಂದಿದೆ. ಗಾಯಾಳುಗಳನ್ನು ಅಂಬುಲೆನ್ಸ್‌ಗಳ ಮೂಲಕ ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆಗೆ ರವಾನಿಸುವ ಕಾರ್ಯ ಕ್ಷಿಪ್ರವಾಗಿ ನಡೆದಿದೆ.
ಕೊಲ್ಲೂರು ಠಾಣೆ ಪಿಎಸ್ಐಗಳಾದ ವಿನಯ್ ಎಂ. ಕೊರ್ಲಹಳ್ಳಿ, ಭೀಮಾಶಂಕರ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಹಾಗೂ ಗಾಯಾಳುಗಳಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Comments are closed.