ಕರಾವಳಿ

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Pinterest LinkedIn Tumblr

ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ವತಿಯಿಂದ ಕೊಡಮಾಡುವ 34 ನೇ ವರ್ಷದ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2025-26 ನೇ ಸಾಲಿನ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 85 ಹಾಗೂ ಅದಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜೂ. 1 ರಿಂದ ಕುಂದಾಪುರದ ಬಿಲ್ಲ ಸಮಾಜ ಸೇವಾ ಸಂಘದ ಕಚೇರಿಯಲ್ಲಿ ಕೊಡಲಾಗುತ್ತಿದೆ. ಜೂ.20 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ, ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಹಾಗೂ ಕಾರ್ಯದರ್ಶಿ ಯೋಗೀಶ್ ಪೂಜಾರಿ ಕೋಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Comments are closed.