ಕರಾವಳಿ

ಪ್ರಧಾನಿ ಮೋದಿ ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಕೊಲ್ಲೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Pinterest LinkedIn Tumblr

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ಬೆಳಿಗ್ಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಶಾಸಕರಾದ ವಿ.ಸುನೀಲ್ ಕುಮಾರ್, ಭೈರತಿ ಬಸವರಾಜ್‌, ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ತಾ.ಪಂ ಮಾಜಿ ಸದಸ್ಯ ಉಮೇಶ್‌ ಶೆಟ್ಟಿ ಕಲ್ಲದ್ದೆ, ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್‌ ಶೆಟ್ಟಿ ಗೋಪಾಡಿ ಮೊದಲಾದವರಿದ್ದರು.

ತಮ್ಮ ಅಧೀಕೃತ ಸೋಶಿಯಲ್ ಮಿಡಿಯಾ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, ‘ನಾಡಿನ ಪರಮ ಪವಿತ್ರ ಶಕ್ತಿಪೀಠ, ಶ್ರೀಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ಜಗನ್ಮಾತೆಯ ದಿವ್ಯ ದರ್ಶನ ಪಡೆದು, ನಾಡಿನ ಸಮಸ್ತ ಜನರ ಸುಖ-ಶಾಂತಿ, ಸಮೃದ್ಧಿಗಾಗಿ, ತಾಯಿಯ ಕೃಪಾಕಟಾಕ್ಷ ನಾಡಿನ ಮೇಲೆ ಸದಾ ಇರಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸಲಾಯಿತು’.

‘ವಿಕಸಿತ ಭಾರತದ ನಿರ್ಮಾಣಕ್ಕೆ ಶ್ರಮಿಸುತ್ತಿರುವ ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಸರ್ಕಾರ ಸಾರ್ಥಕ ಸಾಧನೆಗಳ 12 ವರ್ಷಗಳನ್ನು ಪೂರೈಸಿರುವ ಸಂದರ್ಭದ ಅಂಗವಾಗಿ ಜಗನ್ಮಾತೆಗೆ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಲಾಯಿತು’ ಎಂದಿದ್ದಾರೆ.

Comments are closed.