ಕರಾವಳಿ

ತ್ರಾಸಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು 

Pinterest LinkedIn Tumblr

ಕುಂದಾಪುರ: ದ್ವಿಚಕ್ರ ವಾಹನಗಳೆರಡರ ನಡುವೆ ಸೋಮವಾರ ತ್ರಾಸಿ ಬೀಚ್ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮುಂಜಾನೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪಡುಕೋಣೆ ಹಡವು ನಿವಾಸಿ ಪೆಟ್ರಿಕ್ ವಾಸ್ (63)  ಮೃತಪಟ್ಟವರು.

ಪೆಟ್ರಿಕ್ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿ ಬಳಿಕ ಊರಿಗೆ ಆಗಮಿಸಿ ವೆಲ್ಡಿಂಗ್ ಶಾಪ್ ನಡೆಸಿಕೊಂಡಿದ್ದರು. ಸೋಮವಾರ ಸಂಬಂಧಿಕರನ್ನು ಭೇಟಿಯಾಗಿ ವಾಪಾಸ್ಸು ಮನೆಗೆ ಮರಳುವಾಗ ಈ ಅಪಘಾತ ನಡೆದಿತ್ತು. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಸೋಮವಾರ ತ್ರಾಸಿ ಬೀಚ್ ಬಳಿಯ ಅರಮ ದೇವಸ್ಥಾನದ ಎದುರು ಸಂಭವಿಸಿದ್ದು ಭಟ್ಕಳ ಸಣಭಾವಿ ನಿವಾಸಿ ದೀಪಕ್ ನಾಗಪ್ಪ ನಾಯ್ಕ್ (23) ಮೃತಪಟ್ಟಿದ್ದರು. ಇನ್ನೊಂದು ದ್ವಿಚಕ್ರ ವಾಹನದಲ್ಲಿದ್ದ ಪೆಟ್ರಿಕ್ ಹಾಗೂ ಅವರ ಪುತ್ರಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.