ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ 85 ವರ್ಷದ ಚೆನ್ನಮ್ಮ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆದರೆ ಶನಿವಾರ ಸಂಜೆ 4.30ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954 ಮೇ 25ರಂದು ಹೆಚ್.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ 6 ಜನ ಮಕ್ಕಳಿದ್ದಾರೆ.
ದಂಪತಿಗೆ ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ, ಹೆಚ್.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಾಗಿ ನಿಂತಿದ್ದರು.
Comments are closed.